ಕೊಡಗು ಜಿಲ್ಲಾ ಪಂಚಾಯತ್ CEO ಆನಂದ್ ಪ್ರಕಾಶ್ ಮೀನಾ ವರ್ಗಾವಣೆ;ದಿನೇಶ್ ಕುಮಾರ್ ಮೀನಾ ನೂತನ CEO
admincoorgdaily

ಮಡಿಕೇರಿ: ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಪ್ರಕಾಶ್ ಮೀನಾ ಅವರನ್ನು ವಿಜಯಪುರ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೊಡಗು ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕೊಳ್ಳೇಗಾಲ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ ದಿನೇಶ್ ಕುಮಾರ್ ಮೀನಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.