Kodagu

ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ

admincoorgdaily

ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ
ಮಡಿಕೇರಿ ಸೆ.28 : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಸುತ್ತಿರುವ ಜನಜಾಗೃತಿ ಅಂಗವಾಗಿ ಅ.1ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಸಿದ್ದಾಪುರದಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸಂವಿಧಾನದ 244, 371ನೇ ವಿಧಿಗಳು ಹಾಗೂ 5 ಮತ್ತು 6ನೇ ಶೆಡ್ಯೂಲ್ ಅಡಿಯಲ್ಲಿ ಸ್ವ-ಆಡಳಿತಕ್ಕೆ ಒತ್ತಾಯಿಸಲಾಗುವುದು. ಕೊಡವ ಜನಾಂಗಕ್ಕೆ ವಿಶೇಷ ಸಂವಿಧಾನಬದ್ಧ ಮಾನ್ಯತೆ, ಪವಿತ್ರ ಗನ್-ತೋಕ್ ಆಚರಣೆಗೆ ಸಂವಿಧಾನಾತ್ಮಕ ರಕ್ಷಣೆ ಹಾಗೂ ಕೊಡವರಿಗೆ ಪ್ರತ್ಯೇಕ ಅಮೂರ್ತ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರ ಕಲ್ಪಿಸುವಂತೆ ಆಗ್ರಹಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.