ಕೊಡ್ಲಿಪೇಟೆ:ಬ್ಯಾಡಗೊಟ್ಟ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ

ಕೊಡ್ಲಿಪೇಟೆ:ಬ್ಯಾಡಗೊಟ್ಟ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ

ಕೊಡ್ಲಿಪೇಟೆ : ಸಮೀಪದ ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.ರಾಜ್ಯ ಸರಕಾರ ಗ್ರಾಮ ಪಂಚಾಯತಿಗೊಂದು ಆಂಗ್ಲ ಮಾಧ್ಯಮ ಶಾಲೆ ಎಂಬ ಯೋಜನೆಯಡಿ ಬ್ಯಾಡಗೊಟ್ಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆ ಮಾನ್ಯತೆ ದೊರಕಿದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಿಂದ ಒಂದನೇ ತರಗತಿಗೆ ಆಂಗ್ಲ ಮಾಧ್ಯಮ ಪ್ರಾರಂಭಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಶ್ವೇತಾ ಧರ್ಮಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾವನ ಗಗನ್ ಉದ್ಘಾಟಿಸಿದರು.ಗ್ರಾಮ ಸದಸ್ಯ ಮಹಮ್ಮದ್ ಹನೀಫ್,ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾಲೂಕು ಕೆಡಿಪಿ ಸಮಿತಿ ಸದಸ್ಯ ವೇದಕುಮಾರ್,ಸಿಆರ್‌ಪಿ ರವೀಶ್ ,ಬೆಸೂರು ಸಿಆರ್‌ಪಿ ಮುರಳಿಧರ್,ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಆಂಗ್ಲ ಮಾಧ್ಯಮ ಬ್ಯಾಡಗೊಟ್ಟಕ್ಕೆ ದೊರಕಿರುವುದು ಸಂತೋಷದ ವಿಷಯ.ಇದರಿಂದ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವುದಕ್ಕೆ ಸಹಕಾರಿಯಾಗಿದೆ.ಬಡ ವರ್ಗದವರ ಮಕ್ಕಳು ಸಹ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಸದವಕಾಶ ಕಲ್ಪಿಸಿದಂತಾಗಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಮತ್ತು ಹಳೆಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕರುಗಳು ಸೇರಿಕೊಂಡು‌ ಮುಂದಿನ ಸಾಲಿನಿಂದ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿಯಾಗುವಂತೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲು ಸಭೆಯಲ್ಲಿ ನಿರ್ಣಯ ಕ್ಯೆಗೊಳ್ಳಲಾಯಿತು.ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ ರವರು ಸ್ವಾಗತಿಸಿ ,ಸಹ ಶಿಕ್ಷಕಿಯರಾದ ರಿಜ್ವಾನ ಭಾನು ಹಾಗೂ ತೇಜಾವತಿ ರವರುಗಳು ನಿರೂಪಿಸಿ ,ವಂದಿಸಿದರು.

ವೇದಿಕೆಯಲ್ಲಿ ಬ್ಯಾಡಗೊಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರೀಶ್ ,ಶಾಲಾಭಿವೃದ್ದಿ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಸುಲೈಮಾನ್ ,ಮೋಹನ್ ಇದ್ದರು ,ಕಾರ್ಯಕ್ರಮದಲ್ಲಿ ಸ್ಥಳೀಯ ಅಂಗನವಾಡಿ ಶಿಕ್ಷಕಿ ಪವಿತ್ರ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಗನ್ ರ‌್ಯೆ , ಸದಸ್ಯರುಗಳಾದ ತೀರ್ಥ ,ಹನೀಫ್ ಬಿ.ಯು ,ಶಾಲಾಭಿವೃದ್ದಿ ಸಮಿತಿಯ ಪದಾಧಿಕಾರಿಗಳು ಮುಂತಾದವರು ಇದ್ದರು.