2026ರ ಏ.3 ರಿಂದ 7ರ ವರೆಗೆ ಕೊಳಕೇರಿ ಮಖಾಂ ಉರೂಸ್

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ಇತಿಹಾಸ ಪ್ರಸಿದ್ಧ ನಾಪೋಕ್ಲು ಬಳಿಯ ಕೊಳಕೇರಿ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವರ್ಷಂ ಪ್ರತಿ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2026ರ ಏಪ್ರಿಲ್ 3ರಿಂದ 7ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.