ಕೂಡಮಂಗಳೂರು:ಬಸವೇಶ್ವರ ಬಡಾವಣೆಯಲ್ಲಿ ವಾರ್ಡ್ ಸ್ವಚ್ಚತೆ

ಕುಶಾಲನಗರ: ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಸುಂದರನಗರ ವಾರ್ಡ್ ನ ಬಸವೇಶ್ವರ ಬಡಾವಣೆಯಲ್ಲಿ ಸ್ವಚ್ಚತೆ ಕಾರ್ಯವನ್ನು ಕೈಗೊಳ್ಳಲಾಯಿತು.
ಮಳೆಗಾಲ ಪ್ರಾರಂಭವಾಗಿದ್ದು, ಚರಂಡಿಯಲ್ಲರುವ ಕಸಕಡ್ಡಿಗಳನ್ನು ತೆಗೆದು ಸ್ವಚ್ಚಗೊಳಿಸಲಾಯಿತು. ಕಸಗಳಿಂದ ಬ್ಲಾಕ್ ಆಗಿದ್ದ ಚರಂಡಿಗಳನ್ನು ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹೋಗುವಂತೆ ಮಾಡಲಾಯಿತು. ರಸ್ತೆ ಬದಿ ಬೆಳೆದುನಿಂತಿದ್ದ ಗಿಡಗಂಟಿಗಳನ್ನು ಯಂತ್ರದ ಮೂಲಕ ತೆರವುಗೊಳಿಸಲಾಯುತು.
ಈ ಸಂದರ್ಭ ಮಾತನಾಡಿದ ವಾರ್ಡ್ ಸದಸ್ಯ ಕೆ.ಬಿ.ಶಂಶುದ್ಧೀನ್, ಮಳೆಗಾಲದಲ್ಲಿ ಮನೆಯ ಸುತ್ತ ಮುತ್ತಲೂ ಸ್ವಚ್ಚತೆ ಕಾಪಾಡಬೇಕು. ಮನೆ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇದರಿಂದ ಡೆಂಗ್ಯೂವಿನಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಬಹುದು ಎಂದರು.