ಕೂಡಿಗೆ ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ, ಕಾಲೋತ್ಸವ ಕಾರ್ಯಕ್ರಮ
admincoorgdaily

ಕುಶಾಲನಗರ : ಜಿಲ್ಲಾ ಪಂಚಾಯತಿ ಕೊಡಗು, ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,ಕ್ಷೇತ್ರ ಸಂಪನ್ಮೂಲ ಕೇಂದ್ರ ಸೋಮವಾರಪೇಟೆ, ಕೂಡಿಗೆ ಸಮೂಹ ಸಂಪನ್ಮೂಲ ಕೇಂದ್ರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜ್ಞಾನೋದಯ ಆಂಗ್ಲಮಾದ್ಯಮ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಕೂಡಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ವಿವಿಧ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು.
ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಮಕ್ಕಳ ಪ್ರತಿಭೆ ಅನಾವರಣಗೊಂಡಿತು. ಮಕ್ಕಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣ ಸಂಘ(ಗ್ರೇಡ್ ಒನ್)ದ ಅಧ್ಯಕ್ಷ ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ,ವಿದ್ಯಾರ್ಥಿಗಳಲ್ಲಿ ಹುದುಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉತ್ತಮ ವೇದಿಕೆಯನ್ನು ಕಲ್ಪಿಸುತ್ತದೆ ಎಂದರು.
ಕೂಡಿಗೆ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪಾ ಮಾತನಾಡಿ,
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಪ್ರತಿಭಾಕಾರಂಜಿ ಮಯ ಕಲೋತ್ಸವ ಮಹತ್ತರ ಪಾತ್ರ ವಹಿಸುತ್ತದೆ ಎಂದರು.
ಉತ್ತಮ ಪ್ರತಿಭೆಗೆ ಪ್ರೋತ್ಸಾಹ ನೀಡಿದರೆ ಭವಿಷ್ಯದಲ್ಲಿ ಉತ್ತಮ ಪ್ರತಿಭೆಯನ್ನು ಹೊರತರಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರದ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಪ್ರಸನ್ನ ಕುಮಾರ್ ಮಾತನಾಡಿ,
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ಒಂದು ರೀತಿಯ ಪ್ರತಿಭೆ ಇರುತ್ತದೆ. ಅದನ್ನು ಹೊರತರಲು ಪ್ರತಿಭಾ ಕಾರಂಜಿ ಸ್ಪರ್ಧೆಯು ವೇದಿಕೆಯಾಗಿದೆ. ಇದು ಮಕ್ಕಳ ಮನೋಬಲ ವೃದ್ಧಿಯಾಗಲು ಹಾಗೂ ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಸಮಗ್ರ ಶಿಕ್ಷಣವನ್ನು ಎಲ್ಲಾ ಮಕ್ಕಳಿಗೂ ನೀಡುವ ಮೂಲಕ ಅವರನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೆ ಒತ್ತು ನೀಡಬೇಕು.ಕೇವಲ ಅಂಕಗಳನ್ನು ಮಾನದಂಡವಾಗಿ ಪರಿಗಣಿಸಬಾರದು ಎಂದು ಹೇಳಿದರು.
ಈ ಸಂದರ್ಭ ಕೂಡಿಗೆ ಡಯಟ್ ಉಪನ್ಯಾಸಕ ಹೇಮಂತ್ ರಾಜ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಬಸವರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್,ಸರ್ಕಾರಿ ನೌಕರರ ಸಂಘದ ತಾಲ್ಲೂಕು ನಿರ್ದೇಶಕ
ಟಿ.ಎಸ್.ಶಶಿಕುಮಾರ್, ಸಂಪನ್ಮೂಲ ವ್ಯಕ್ತಿ ಉ.ರಾ.ನಾಗೇಶ್,ನಿವೃತ್ತ ಮುಖ್ಯ ಶಿಕ್ಷಕ
ಟಿ.ಜಿ.ಪ್ರೇಮಕುಮಾರ್,ಜ್ಞಾನೋದಯ ಆಂಗ್ಲಮಾದ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸೆಲ್ವಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ
ಶಾಂತಕುಮಾರ್,ಶಿಕ್ಷಕರ ಸಹಕಾರ ಪತ್ತಿನ ಸಂಘದ ನಿರ್ದೇಶಕ ಶಿವಲಿಂಗ,ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು,ಶಿಕ್ಷಕಿಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಇದೇ ಸಂದರ್ಭ ಕೂಡಿಗೆ ಪಂಚಾಯತಿಯ ಪ್ರೌರಕಾರ್ಮಿಕರಾದ ಗಣೇಶ,ಮಂಜುನಾಥ್, ಆನಂದ,ಶಿವು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಕ ಎಸ್.ಮೋಹನ್ ಕುಮಾರ್ ಶೀಗೋಡು ನಿರೂಪಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದರಿಗೆ ಅತಿಥಿಗಳು ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಣೆ ಮಾಡಿದರು.