Kodagu

ಮೂರು ರಾಷ್ಟ್ರೀಯ ಮಟ್ಟದ ಮತ್ತು ಒಂದು ರಾಜ್ಯಮಟ್ಟದ ಪ್ರಶಸ್ತಿ ವಿಜೇತೆ ಕಡ್ಲೇರ ತುಳಸಿ ಮೋಹನ್ ರವರಿಗೆ ಸನ್ಮಾನ

admincoorgdaily

ಮೂರು ರಾಷ್ಟ್ರೀಯ ಮಟ್ಟದ ಮತ್ತು ಒಂದು ರಾಜ್ಯಮಟ್ಟದ ಪ್ರಶಸ್ತಿ ವಿಜೇತೆ ಕಡ್ಲೇರ ತುಳಸಿ ಮೋಹನ್ ರವರಿಗೆ ಸನ್ಮಾನ
ಮಡಿಕೇರಿ. ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿ, ರಾಣಿ ಅಬ್ಬಕ್ಕ  ರಾಷ್ಟ್ರೀಯ ಪ್ರಶಸ್ತಿ,  ಸಮಾಜ ಸೇವಾ ಕಲಾ ರತ್ನ ರಾಷ್ಟ್ರೀಯ ಪ್ರಶಸ್ತಿ ಮತ್ತು ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ, ಗಳಿಗೆ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್ ರವರು ಭಾಜನರಾಗಿದ್ದಾರೆ. ಸಾಹಿತ್ಯ ಪರಿಷತ್ತಿನಲ್ಲೂ ತಾಲೂಕಿನಾದ್ಯಂತ ಗಮನಾರ್ಹ ಕಾರ್ಯಕ್ರಮಗಳನ್ನು ನಡೆಸುವ ಮೂಲಕ, ನೂತನ ದತ್ತಿನಿದಿಗಳನ್ನು ಸ್ಥಾಪಿಸುವ ಮೂಲಕ ಸಾಧನೆಗೈದಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ ರಮೇಶ್ ನುಡಿದರು ಅವರು ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ನಡೆದ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಕಡ್ಲೇರ ತುಳಸಿ ಅವರನ್ನು ಸನ್ಮಾನಿಸಿದರು. 

     ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಮಾತನಾಡಿ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ಚೆಟ್ಟಿಮನಿ ಗ್ರಾಮದಲ್ಲಿ ಗ್ರಾಮ ಸಿರಿ ಕಾರ್ಯಕ್ರಮ, ಕರಿಕೆಯಲ್ಲಿ ಗಡಿ ಉತ್ಸವ, ಕಡಂಗ ದಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರು ಈ ಪ್ರಶಸ್ತಿಗಳಿಗೆ ಅರ್ಹ ವ್ಯಕ್ತಿಯಾಗಿದ್ದಾರೆ ಎಂದರು.
     ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಕಡ್ಲೇರ ತುಳಸಿ ಮೋಹನ್ ರವರು ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಮಹಿಳೆಯನ್ನು  ತಾಲೂಕು ಅಧ್ಯಕ್ಷ ಮಾಡುವ ಮೂಲಕ ಸಾರ್ವಜನಿಕ ಜೀವನದಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಲು ಸಾಹಿತ್ಯ ಪರಿಷತ್ ಅನುವು ಮಾಡಿಕೊಟ್ಟಿದೆ. ಅದಕ್ಕಾಗಿ ನಾನು ಕನ್ನಡ ಸಾಹಿತ್ಯ ಪರಿಷತ್ತಿಗೆ ಎಂದರು.

        ಇಂಡಿಯನ್ ಸೋಶಿಯಲ್ ವರ್ಕರ್ಸ್ ಅಸೋಸಿಯೇಷನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಕರ್ನಾಟಕ ಸಾಧಕರ ಅಭಿವೃದ್ಧಿ ಮಂಡಳಿ ಟ್ರಸ್ಟ್ ಇವರ ಸಹಭಾಗಿತ್ವದಲ್ಲಿ ಕುಂದಾಪುರದಲ್ಲಿ ನಡೆದ ಸಂಸ್ಕೃತ ಉತ್ಸವ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ, ಜನಸೇವಾ ಫೌಂಡೇಶನ್ ಕರ್ನಾಟಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಅಲಿಯನ್ಸ್ ಇಂಟರ್ನ್ಯಾಷನಲ್ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ನಡೆದ ಸಾಂಸ್ಕೃತಿಕ ಸಂಭ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರಾಷ್ಟ್ರೀಯ ಪ್ರಶಸ್ತಿ, ಸತ್ವ ಫೌಂಡೇಶನ್ ಕರ್ನಾಟಕ ಚಿರಾಯು ಕನ್ನಡ ವಾಹಿನಿ ಇವರ ಸಹಯೋಗದಲ್ಲಿ ಬೆಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ  ರಾಣಿ ಅಬ್ಬಕ್ಕ  ರಾಷ್ಟ್ರೀಯ ಪ್ರಶಸ್ತಿ, ಹಾಗೂ ಶ್ರೀನಿಧಿ ಫೌಂಡೇಶನ್ ಕರ್ನಾಟಕ ಹಾಗೂ ಪ್ರತಿಫಲ ಫೌಂಡೇಶನ್ ಧಾರವಾಡ ಇವರ ಸಹಯೋಗದಲ್ಲಿ ಗೋವಾದ ರವೀಂದ್ರ ಭವನದಲ್ಲಿ ನಡೆದ  ಕನ್ನಡ ಸಾಂಸ್ಕೃತಿಕ ಸಮ್ಮೇಳನ ಗೋವಾ 2026 ಇಲ್ಲಿ ಸಮಾಜ ಸೇವಾ ಕಲಾ ರತ್ನ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ಮಡಿಕೇರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ಸರಳ ಸನ್ಮಾನ ಸಮಾರಂಭದಲ್ಲಿ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರೇವತಿ ರಮೇಶ್, ಸಂಘಟನಾ ಕಾರ್ಯದರ್ಶಿ ವಾಸುರೈ, ಜಿಲ್ಲಾ ಕೋಶಾಧಿಕಾರಿ ಸಂಪತ್ ಕುಮಾರ್, ಸಿಬ್ಬಂದಿ ರೇಣುಕಾ ಉಪಸ್ಥಿತರಿದ್ದರು.