Kodagu

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ದಯಾನಂದ ಪ್ರಕಾಶ್ ಅವರಿಗೆ ರಾಜ್ಯಮಟ್ಟದ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

admincoorgdaily

ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ  ದಯಾನಂದ ಪ್ರಕಾಶ್ ಅವರಿಗೆ ರಾಜ್ಯಮಟ್ಟದ ರಾಜೀವ್ ಗಾಂಧಿ ಶ್ರೇಷ್ಠ ಶಿಕ್ಷಕ ಪ್ರಶಸ್ತಿ
ಮಡಿಕೇರಿ:
ಪ್ರಸಕ್ತ ಸಾಲಿನ ಶಿಕ್ಷಕರ ದಿನಾಚರಣೆ: 2026ರ ಅಂಗವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ಶಿಕ್ಷಕರ ಘಟಕದ ವತಿಯಿಂದ ಸೆಪ್ಟೆಂಬರ್ 5 ರಂದು ಶಿಕ್ಷಕರ ಉತ್ತಮ ಸೇವೆಗಾಗಿ
ಕೊಡಲ್ಪಡುವ ಮಾಜಿ ಪ್ರಧಾನಿ
ಶ್ರೀ ರಾಜೀವ್ ಗಾಂಧಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರೂ ಆದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಗಳೂ ಆದ ಎಂ.ಟಿ.ದಯಾನಂದ ಪ್ರಕಾಶ್ ಭಾಜನರಾಗಿದ್ದಾರೆ.

    ಸೆ.5 ರಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ 
ಶಿಕ್ಷಕರಾದ  ದಯಾನಂದ ಪ್ರಕಾಶ್ ಅವರಿಗೆ ರಾಜ್ಯಮಟ್ಟದ ಈ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ
 ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶ್ರೀ ಎಂ.ಟಿ.ದಯಾನಂದ ಪ್ರಕಾಶ್ ಸರ್ ಅವರಿಗೆ 2023 ರಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.