ಶಾಸಕ ಪೊನ್ನಣ್ಣಗೆ ಕುಲಾಲ ಕುಂಬಾರರ ಸಂಘದ ಅಭಿನಂದನೆ
admincoorgdaily

ವಿರಾಜಪೇಟೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿರುವ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಪದಾಧಿಕಾರಿಗಳು ಬೆಳ್ಳೂರಿನ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ಪುಷ್ಪಗುಚ್ಛ ನೀಡಿ ಶುಭಾಶಯ ಕೋರಲಾಯಿತು. ಮುಂಬರುವ ದಿನಗಳಲ್ಲಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಯಶಸ್ಸು ದೊರಕಲಿ ಎಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.