ಕುಶಾಲನಗರ;ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ
admincoorgdaily

ಕುಶಾಲನಗರ; ಸುಂಟಿಕೊಪ್ಪ ಸಮೀಪದ ಹೇರೂರು ಹಾರಂಗಿ ಹಿನ್ನೀರು ಪ್ರದೇಶದಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿದ್ದ ಯುವಕನ ಮೃತದೇಹ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಏಳನೇ ಹೊಸಕೋಟೆ ನಿವಾಸಿ ರಜಾಕ್ ಅವರ ಪುತ್ರ ರಮೀಜ್ (21) ಅವರು ನಿನ್ನೆ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು.
ಇಂದು ಬೆಳಿಗ್ಗೆಯಿಂದಲೇ ಖ್ಯಾತ ಮುಳುಗು ತಜ್ಞರಾದ ಈಶ್ವರ್ ಮಲ್ಪೆ ಅವರ ತಂಡ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.