ಕುಶಾಲನಗರ;ಡಿಜೆ ಅಬ್ಬರಕ್ಕೆ ಬಿತ್ತು ಬ್ರೇಕ್, 3 ಬಸ್‌ಗಳಿಗೆ ದಂಡ
admincoorgdaily

ಕುಶಾಲನಗರ: ಹೊರ ರಾಜ್ಯಗಳಿಂದ ಕೊಡಗಿಗೆ ಪ್ರವಾಸಕ್ಕೆ ಬಂದು, ಬಸ್‌ಗಳಲ್ಲಿ ಡಿಜೆ ಸೌಂಡ್ ಸಿಸ್ಟಂ ಅಳವಡಿಸಿಕೊಂಡು ಕರ್ಕಶ ಶಬ್ದದಿಂದ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಮೂರು ಬಸ್‌ಗಳ ವಿರುದ್ಧ ಕುಶಾಲನಗರ ಟ್ರಾಫಿಕ್ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.
ಕುಶಾಲನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿಯಮ ಉಲ್ಲಂಘಿಸಿದ ಮೂರು ಬಸ್‌ಗಳಿಗೆ ಒಟ್ಟು 4500 ರೂ. ದಂಡ ವಿಧಿಸಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಈ ಕುರಿತು ಮಾಹಿತಿ ನೀಡಲಾಗಿದ್ದು, ಪ್ರವಾಸಿ ಬಸ್‌ಗಳಲ್ಲಿ ಅತಿಯಾದ ಶಬ್ದ ಮಾಡುವ ಡಿಜೆ ಸಿಸ್ಟಂ ಬಳಕೆ ಮಾಡದಂತೆ ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.