Kodagu

ಕುಶಾಲನಗರ:ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಮಂತರ್ ಗೌಡ

admincoorgdaily

ಕುಶಾಲನಗರ:ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಶಾಸಕ ಮಂತರ್ ಗೌಡ
ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಇಂದು ಕುಶಾಲನಗರದಲ್ಲಿರುವ ತಮ್ಮ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ಅಹವಾಲುಗಳನ್ನು ಶಾಸಕರಿಗೆ ಸಲ್ಲಿಸಿದರು. ರಸ್ತೆ, ಕುಡಿಯುವ ನೀರು, ಪಿಂಚಣಿ, ಮನೆ ಹಾಗೂ ಇತರೆ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಮನವಿಗಳನ್ನು ಜನರು ನೀಡಿದರು.

ಅಹವಾಲುಗಳನ್ನು ಆಲಿಸಿದ ಶಾಸಕ ಮಂತರ್ ಗೌಡ ಅವರು, ಎಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿ ಶೀಘ್ರದಲ್ಲಿ ಪರಿಹಾರ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಕಚೇರಿ ಕಾರ್ಯದರ್ಶಿ ಹೆಬ್ಬಾಲೆ ರಂಜನ್, ಇರ್ಫಾನ್, ಪುರಸಭೆ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಶೇಕ್ ಕಲೀಮುಲ್ಲಾ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತಾ ಮಂಜುನಾಥ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಹಮೀದ್, ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತಪ್ಪ  ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.