ಕೆವಿಜಿ ಅಮರಜ್ಯೋತಿ ಕಾಲೇಜಿನ ಎ.ಜೆ. ವಿದ್ಯಾರ್ಥಿವೇತನ ಪರೀಕ್ಷೆ ಯಶಸ್ವಿ
admincoorgdaily

ಸುಳ್ಯ: ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜು, ಕುರುಂಜಿಭಾಗ್ ಇದರ ವತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಎ.ಜೆ. ವಿದ್ಯಾರ್ಥಿವೇತನ ಪರೀಕ್ಷೆ–2026 ನವೆಂಬರ್ 22ರಂದು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು.
ಪರೀಕ್ಷೆಯು ಭಾಗಮಂಡಲದ ಕೆವಿಜಿ ಐಟಿಐ ಹಾಗೂ ಕುಶಾಲನಗರದ ವಾಟರ್ ಟ್ಯಾಂಕ್ ಸಮೀಪದ ಜೂನಿಯರ್ ಕಾಲೇಜು (ಗುಂಡಿ ಕಾಲೇಜು) ಕೇಂದ್ರಗಳಲ್ಲಿ ನಡೆಯಿತು.
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಯನ್ನು ಗುರುತಿಸಿ, ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ ವಲಯದ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6 ಮತ್ತು ಡಿಸೆಂಬರ್ 20ರಂದು ಸುಳ್ಯದ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನಲ್ಲಿ ಮೂರನೇ ಪರೀಕ್ಷಾ ಕೇಂದ್ರದ ಮೂಲಕ ಪರೀಕ್ಷೆ ನಡೆಯಲಿದೆ.
ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ವಿಜ್ಞಾನ ವಿಭಾಗದ ಐವರು ಹಾಗೂ ವಾಣಿಜ್ಯ ವಿಭಾಗದ ಐವರು ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪಿಯುಸಿ ಶಿಕ್ಷಣಕ್ಕಾಗಿ ಎ.ಜೆ. ವಿದ್ಯಾರ್ಥಿವೇತನ ನೀಡಲಾಗುವುದು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವುದರೊಂದಿಗೆ ಅವರ ಶೈಕ್ಷಣಿಕ ಭವಿಷ್ಯಕ್ಕೆ ಆರ್ಥಿಕ ನೆರವು ನೀಡುವ ಕೆವಿಜಿ ಅಮರಜ್ಯೋತಿ ಕಾಲೇಜಿನ ಈ ಪ್ರಯತ್ನವು ಶ್ಲಾಘನೀಯವಾಗಿದೆ.