Kodagu

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

admincoorgdaily

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ
ವಿರಾಜಪೇಟೆ, ಸೆ.15: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ 40ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೆರಿರ ನವೀನ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾದರು. ಎಲ್ಲರಿಗೂ ಪಕ್ಷದ ಶಾಲು ಹೊದಿಸಿ, ಕಾಂಗ್ರೆಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಪಕ್ಷ ಸೇರ್ಪಡೆಗೊಂಡ ಪ್ರಮುಖರು ಮಾತನಾಡಿ, ಶಾಸಕರು ಮಾಡುತ್ತಿರುವ ಸಮಾಜಮುಖಿ ಕಾರ್ಯ ಹಾಗೂ ಜನಪರ ಕಾಳಜಿಯನ್ನು ಮೆಚ್ಚಿ ಅವರಿಗೆ ಮತ್ತಷ್ಟು ಬಲ ನೀಡುವ ಸಲುವಾಗಿ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಪ್ಪಚಂಗಡ ಪಿ.ಮೋಟಯ್ಯ, ತಿತೀರ ಪ್ರಭು, ಪೆಮ್ಮಂಡ ಅರುಣಾ, ಚೊಟ್ಟೆಯಾಂಡಮಡ ವಿಶು, ಕುಪ್ಪಣ್ಣಮಡ ಪ್ರೀತಮ್, ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಹರೀಶ್ ಪೂವಯ್ಯ, ಬೊಟ್ಟಂಗಡ ಜಗಧೀಶ್, ರೋಬಿನ್, ಕಟ್ಟೇರ ಗಣೇಶ, ಕಳಕಂಡ ಜೀತು, ಅಣ್ಣಿರ ಹರೀಶ್, ಬೋಪಯ್ಯ, ಮಹಾದೇವ, ನಾಸಿರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.