ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
admincoorgdaily

ಕುಟ್ಟ, ಅ.7: ಕುಟ್ಟ ಭಾಗದ ಬಿಜೆಪಿ ಕಾರ್ಯಕರ್ತ ಸನೋಜ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್ ಅವರ ನೇತೃತ್ವದಲ್ಲಿ, ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕಾಂಗ್ರೆಸ್ ಬಾವುಟ ಹಿಡಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎ.ಜೆ. ಬಾಬು, ಪಕ್ಷದ ಹಿರಿಯ ಮುಖಂಡರಾದ ಮೋಟಯ್ಯ, ಚೋಂದಮ್ಮ, ಶ್ರೀಮಂಗಲ ವಲಯ ಅಧ್ಯಕ್ಷ ಪಾಲ್ವಿನ್ ಪೂಣಚ್ಚ, ನಿಟ್ಟೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪವನ್ ಉಪಸ್ಥಿತರಿದ್ದರು.
ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರ ಜನಪರ ಕಾರ್ಯವೈಖರಿ ಮತ್ತು ಕಾಂಗ್ರೆಸ್ ಸಿದ್ಧಾಂತವನ್ನು ಮೆಚ್ಚಿ ಪಕ್ಷ ಸೇರುತ್ತಿರುವುದಾಗಿ ಸನೋಜ್ ತಿಳಿಸಿದರು.