ಬೆಟ್ಟಗೇರಿಯಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
admincoorgdaily

ಮಡಿಕೇರಿ: ತಾಲೂಕಿನ ಬೆಟ್ಟಗೇರಿ ಕಾರಗುಂದ ಭಾಗದ 15ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥ ಕುಮಾರ್ ಹಾಗೂ ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಗೌರೀಶ್ ರೈ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ, ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಕಾಂಗ್ರೆಸ್ ಪಕ್ಷದ ಜನಪರ ಕಾಳಜಿ ಹಾಗೂ ಶಾಸಕ ಪೊನ್ನಣ್ಣ ಅವರು ಕ್ಷೇತ್ರದ ಅಭಿವೃದ್ಧಿಗೆ ತೋರುತ್ತಿರುವ ವಿಶೇಷ ಕಾಳಜಿಯನ್ನು ಮನಗಂಡು ಬೆಂಬಲ ನೀಡಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಕೈಜೋಡಿಸಿ ಪಕ್ಷ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಸೇರ್ಪಡೆಗೊಂಡ ಕಾರ್ಯಕರ್ತರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ತಾಲೂಕು ಗ್ಯಾರಂಟಿ ಸದಸ್ಯ ಸಿರಾಜ್ ಪರವಂಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.