ಜನವರಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ;ಸದ್ಯದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ ಸಚಿವ ಈಶ್ವರ್ ಖಂಡ್ರೆ
admincoorgdaily

ಶಿವಮೊಗ್ಗ: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಮುಂದಿನ ವರ್ಷದ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸಚಿವ ಸಂಪುಟ ಈಗಾಗಲೇ ತೀರ್ಮಾನಿಸಿದೆ.
ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಈ ಸಂಬಂಧ ಸುಮಾರು 1,800 ಅರ್ಜಿಗಳು ಸಲ್ಲಿಕೆಯಾಗಿವೆ. ಒಂದು ವಾರದೊಳಗೆ ಆಕ್ಷೇಪಣೆಗಳನ್ನು ಪರಿಶೀಲಿಸಿ, ಈ ತಿಂಗಳ ಅಂತ್ಯದೊಳಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಾರ ಕರೀಣ ಕ್ರಮ ಕೈಗೊಳ್ಳಲಾಗುವುದು. ಪ್ರಕಟಿಸಲಾಗುವುದು ಎಂದರು.
ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು. ಬಳಿಕ ಆಯೋಗ ಚುನಾವಣಾ ದಿನಾಂಕ ಘೋಷಿಸಲಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಸಲಾಗುತ್ತದೆ. ಚುನಾವಣೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲು ಆಯೋಗಕ್ಕೆ ಸುಮಾರು ಒಂದೂವರೆ ತಿಂಗಳ ಕಾಲಾವಕಾಶ ಬೇಕಾಗುತ್ತದೆ.
ಈ ಹಿನ್ನೆಲೆಯಲ್ಲಿ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು.