ಮಡಿಕೇರಿ ನಗರಸಭೆಗೆ ಲೋಕಾಯುಕ್ತ ದಾಳಿ; ಪೌರಾಯುಕ್ತರ ಮನೆ, ಕಚೇರಿ ಮೇಲೆ ಪರಿಶೀಲನೆ
admincoorgdaily

ಮಡಿಕೇರಿ; ಮಡಿಕೇರಿ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.
ನಗರಸಭೆಯ ಕಚೇರಿಗೆ ಆಗಮಿಸಿದ ಲೋಕಾಯುಕ್ತ ತಂಡ ಕಡತಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡಿದ್ದಾರೆ.
ಇದೇ ವೇಳೆ ಪೌರಾಯುಕ್ತ ರಮೇಶ್ ಅವರ ನಿವಾಸದ ಮೇಲೂ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.