Kodagu

ನೆಲ್ಲಿಹುದಿಕೇರಿ ಬಳಿ ಕಾರ್ಮಿಕರ ಮೇಲೆ ಒಂಟಿ ಸಲಗ ದಾಳಿ; ಓರ್ವ ಗಂಭೀರ

admincoorgdaily

ಸಾಂದರ್ಭಿಕ ಚಿತ್ರ
ನೆಲ್ಲಿಹುದಿಕೇರಿ;ವ್ಯಾಪ್ತಿಯ ಅತ್ತಿಮಂಗಲ ಬಳಿ ಸ್ಕೂಟಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ.

ದಾಳಿಯಲ್ಲಿ ಅಭ್ಯತ್ ಮಂಗಲ ನಿವಾಸಿ ಸುಬ್ರಮಣಿ (57)* ಅವರಿಗೆ ಗಂಭೀರ ಗಾಯಗಳಾಗಿದ್ದು, ಜೊತೆಗಿದ್ದ ಮತ್ತೋರ್ವ ಕಾರ್ಮಿಕ ಉಮೇಶ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸಿದ್ದಾಪುರ ಕಡೆಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಗಾಯಾಳು ಸುಬ್ರಮಣಿ ಅವರಿಗೆ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಸ್ಥಳೀಯ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.