Kodagu

ಸೆ.04 ರಂದು ಶ್ರೀಕೃಷ್ಣ ಜನ್ಮಾಷ್ಠಮಿ

admincoorgdaily

ಸೆ.04 ರಂದು ಶ್ರೀಕೃಷ್ಣ ಜನ್ಮಾಷ್ಠಮಿ
ಮಡಿಕೇರಿ:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಸೆಪ್ಟೆಂಬರ್, 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. 

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್,  ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಮಡಿಕೇರಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎನ್.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ಅಧ್ಯಕ್ಷರಾದ ಜಿ.ಎಲ್.ದಾಸ, ಗೌರವಾಧ್ಯಕ್ಷರಾದ ಜಿ.ಎ.ಚಾಮಿ, ಜಿ.ವಿ.ರವಿಕುಮಾರ್, ಜಿ.ಜಿ.ಬಾಲಕೃಷ್ಣ, ಉಪಾಧ್ಯಕ್ಷರಾದ ಜಿ.ಸಿ.ಜಗದೀಶ್, ಪ್ರಧಾನ ಕಾರ್ಯದರ್ಶಿ ಜಿ.ಆರ್.ಗಣೇಶ್, ಖಜಾಂಚಿ ಜಿ.ಸಿ.ರಮೇಶ್, ನಿರ್ದೇಶಕರಾದ ರಘುರಾಮ್, ಕುಶಾಲನಗರ ನಿವೃತ್ತ ಕಲಾ ಶಿಕ್ಷಕರಾದ ಉ.ರಾ.ನಾಗೇಶ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನ ಎಸ್.ಹಾದಿಮನಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಇತರರು ಪಾಲ್ಗೊಳ್ಳಲಿದ್ದಾರೆ.