Kodagu

ಮಾದಾಪುರ ಜಿಲ್ಲಾ ಪಂಚಾಯತ್ ಕ್ಷೇತ್ರ: ಕಾಂಗ್ರೆಸ್ ಟಿಕೆಟ್‌ಗೆ ಹರದೂರು ಗ್ರಾಮ‌ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುಸ್ತಫಾ ಗರಗಂದೂರು ಪ್ರಬಲ ಆಕಾಂಕ್ಷಿ

admincoorgdaily

ಮುಸ್ತಫಾ ಗರಗಂದೂರು
ಸೋಮವಾರಪೇಟೆ: ನಾನು ಮಾದಪುರ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಾ ಬಂದಿದ್ದೇನೆ ಎಂದು ಹರದೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಮುಸ್ತಫಾ ಗರಗಂದೂರು ಅವರು ತಿಳಿಸಿದ್ದಾರೆ.

ಹರದೂರು ಗ್ರಾಮ ಪಂಚಾಯತ್ ಸದಸ್ಯನಾಗಿ ಮತ್ತು ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಿರುವ ನಾನು, ನನ್ನ ಅವಧಿಯಲ್ಲಿ ಗ್ರಾಮದ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ.

ಮಾದಪುರ ಜಿಲ್ಲಾ ಪಂಚಾಯತ್ ಕ್ಷೇತ್ರ ವ್ಯಾಪ್ತಿಯಲ್ಲಿ ನನಗೆ ಅಪಾರ ಜನಬೆಂಬಲವಿದ್ದು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಪಕ್ಷ ನನಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.