Kodagu

ಮಡಿಕೇರಿ;ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು

admincoorgdaily

ಮಡಿಕೇರಿ;ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಆಟೋ ಚಾಲಕನ ವಿರುದ್ಧ ಪ್ರಕರಣ ದಾಖಲು
ಮಡಿಕೇರಿ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಆಟೋ ಚಾಲಕನ ವಿರುದ್ಧ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಡಿಕೇರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಚಯವಿದ್ದ ಆಟೋ ಚಾಲಕ ಮಣಿಕಂಠ ಎಂಬಾತ ಡ್ರಾಪ್ ನೀಡುವ ನೆಪದಲ್ಲಿ ಬಾಲಕಿಯನ್ನು ಆಟೋದಲ್ಲಿ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂಬುದು ಆರೋಪವಾಗಿದೆ.

ಮನೆಗೆ ಬಂದ ನಂತರ ಬಾಲಕಿ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರು ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಮಡಿಕೇರಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.