ಅ.11 ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ
admincoorgdaily

ಮಡಿಕೇರಿ:-ಮಡಿಕೇರಿ ದಸರಾ-2026ರ ಅಂಗವಾಗಿ ದಸರಾ ಸಾಂಸ್ಕೃತಿಕ ಸಮಿತಿಯ ವತಿಯಿಂದ ಅಕ್ಟೋಬರ್ 11 ರಿಂದ 21 ರವರೆಗೆ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯಲಿದೆ.
ನಗರದ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಕಾಫಿ ದಸರಾ, ಕವಿಗೋಷ್ಠಿ, ಮಕ್ಕಳ ದಸರಾ, ಜನಪದ ದಸರಾ, ಯುವ ದಸರಾ ಹಾಗೂ ಮಹಿಳಾ ದಸರಾ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳು ಜನಮನ ಸೆಳೆಯಲಿವೆ.
ಅಕ್ಟೋಬರ್, 11 ರಂದು ಸಂಜೆ 5.30ಕ್ಕೆ ಪಂಪಿನ ಕೆರೆಯಲ್ಲಿ ಕರಗ ಉತ್ಸವಕ್ಕೆ ಚಾಲನೆ ದೊರೆಯಲಿದೆ. ಅಕ್ಟೋಬರ್ 12, ರಂದು ಸಂಜೆ 6.30ಕ್ಕೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 13 ರಂದು ಬೆಳಗ್ಗೆ ಕಾಫಿ ದಸರಾ ಉದ್ಘಾಟನೆ ನಡೆಯಲಿದ್ದು, ಸಂಜೆ 4 ಗಂಟೆಗೆ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.
ಅಕ್ಟೋಬರ್ 14 ರಂದು ಬೆಳಗ್ಗೆ 10 ಗಂಟೆಗೆ ಕಾಫಿ ದಸರಾ ಮೇಳ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 15 ರಂದು ಬೆಳಗ್ಗೆ 10 ಗಂಟೆಗೆ ಕವಿಗೋಷ್ಠಿ ಹಾಗೂ ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 16 ರಂದು ಬೆಳಗ್ಗೆ 9 ಗಂಟೆಗೆ ಮಕ್ಕಳ ದಸರಾ ಸ್ಪರ್ಧೆಗಳು ಹಾಗೂ ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಅಕ್ಟೋಬರ್ 17 ರಂದು ಬೆಳಗ್ಗೆ 10 ಗಂಟೆಗೆ ಶ್ವಾನ ಪ್ರದರ್ಶನ (ಡಾಗ್ ಶೋ) ಹಾಗೂ ಸಂಜೆ 6 ಗಂಟೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 18 ರಂದು ಬೆಳಗ್ಗೆ 10 ಗಂಟೆಗೆ ಜನಪದ ದಸರಾ ಹಾಗೂ ಸಂಜೆ 6.30ಕ್ಕೆ ಯುವ ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಕ್ಟೋಬರ್ 19 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ದಸರಾ ಹಾಗೂ ಸಂಜೆ 6.30ಕ್ಕೆ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್, 20 ರಂದು ಆಯುಧ ಪೂಜೆಯ ಅಂಗವಾಗಿ ಸಂಜೆ 6 ಗಂಟೆಯಿಂದ ಗಾಂಧಿ ಮೈದಾನದಲ್ಲಿ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.
ಅಕ್ಟೋಬರ್, 21 ರಂದು ವಿಜಯ ದಶಮಿಯಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ದಸರಾ ಮಂಟಪಗಳ ಆಕರ್ಷಕ ಶೋಭಾಯಾತ್ರೆ ಸಾಗಲಿದೆ.
ಅಕ್ಟೋಬರ್, 22 ರಂದು ಬೆಳಗ್ಗೆ 6 ಗಂಟೆಗೆ ಅತಿಥಿಗಳಿಂದ ವಿಜೇತ ದಸರಾ ಮಂಟಪಗಳಿಗೆ ಪ್ರಶಸ್ತಿ ವಿತರಣೆ ನಡೆಯಲಿದೆ.