ಮಡಿಕೇರಿ ದಸರಾ;ಡಿಜೆ ಬಳಕೆಗೆ ಕಾನೂನಿನಡಿ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ನಿರ್ದೇಶನ
admincoorgdaily

ಮಡಿಕೇರಿ: ಮಡಿಕೇರಿ ದಸರಾ ಉತ್ಸವದಲ್ಲಿ ದಶಮಂಟಪಗಳ ಶೋಭಾಯಾತ್ರೆ ಸಂದರ್ಭ ಡಿಜೆ ಬಳಕೆಗೆ ಅನುಮತಿ ನೀಡುವ ನಿಟ್ಟಿನಲ್ಲಿ ಕಾನೂನಿನಡಿ ಕ್ರಮಕ್ಕೆಗೊಳ್ಳುವಂತೆ ರಾಜ್ಯ ಉಚ್ಚ ನ್ಯಾಯಾಲಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಡಿಜೆ ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರೂ ಅನುಮತಿ ನೀಡಿಲ್ಲ; ವಿಜಯದಶಮಿಯಂದು ಡಿಜೆ ಬಳಕೆಗೆ ಜಿಲ್ಲಾಡಳಿತದಿಂದ ಅನುಮತಿ ನೀಡಲು ಸೂಚನೆ ನೀಡಬೇಕೆಂದು ದಶಮಂಟಪ ಸಮಿತಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.
ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಡಿಜೆ ಬಳಕೆ ಸಂಬಂಧ ಕಾನೂನು ನಿಯಮಗಳೇನಿದೆ ಅದರಂತೆ ಅಗತ್ಯ ಕ್ರಮಕ್ಕೆಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಈ ವಿಚಾರ ಸಂಬಂಧ ಮತ್ತೊಮ್ಮೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಆಕ್ಷೇಪಣೆ ಸಲ್ಲಿಸಲಾಗುವುದು. ಒಂದು ವೇಳೆ ಈ ಬಾರಿ ಕಾನೂನು ಉಲ್ಲಂಘನೆ ಆದರೆ ಕಾನೂನು ಹೋರಾಟ ಮಾಡಲಾಗುವುದು ಎಂದು ಹೈಕೋರ್ಟ್ ವಕೀಲ ಅಮೃತೇಶ್ ತಿಳಿಸಿದ್ದಾರೆ.