ಮಡಿಕೇರಿ:ತಾಲ್ಲೂಕು ಆಡಳಿತ ಸೌದ ಕಟ್ಟಡ ಉದ್ಘಾಟನೆ

ಮಡಿಕೇರಿ: ನೂತನವಾಗಿ ನಿರ್ಮಾಣಗೊಂಡಿರುವ ತಾಲೂಕು ಆಡಳಿತ ಸೌಧ ಕಟ್ಟಡದ ಲೋಕಾರ್ಪಣೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು ನೆರವೇರಿಸಿದರು.
ಈ ಸಂದರ್ಭದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ,ಗ್ಯಾರಂಟಿ
ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಾಜಿ ವಿಧಾನ ಪರಿಸತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ,ತಾಲೂಕು ದಂಡಾಧಿಕಾರಿಯವರಾದ ಪ್ರವೀಣ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸರಕಾರಿ ನಾಮನಿರ್ದೇಶಕ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಪ್ರಮುಖ ಉಪಸಿತರಿದ್ದರು.