Kodagu

ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಶೋಭಾ ಎಂ.ಎಸ್. ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕಾರ

admincoorgdaily

ಮಹಾರಾಣಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಶೋಭಾ ಎಂ.ಎಸ್. ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕಾರ
1002880826.jpg


ಮಡಿಕೇರಿ: ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥೆಯಾಗಿದ್ದ ಡಾ. ಶೋಭಾ ಎಂ.ಎಸ್. ಅವರು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರೇಡ್ ೧ ಖಾಯಂ ಪ್ರಾಂಶುಪಾಲರಾಗಿ ನೇಮಕಗೊಂಡು, ಇಂದು ಬೆಳಿಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ಡಾ. ಶೋಭಾ ಅವರು, ಒಟ್ಟು 215 ಪ್ರಾಂಶುಪಾಲರ ಹುದ್ದೆಗಳ ನೇಮಕಾತಿಯಲ್ಲಿ ಆಯ್ಕೆಯಾಗಿದ್ದಾರೆ.
ಡಾ. ಶೋಭಾ ಅವರು ಶಿವಶಂಕರ್ ಮತ್ತು ಕಮಲಮ್ಮ ದಂಪತಿಯ ಪುತ್ರಿ. ಅವರ ತಂದೆ ರಾಜ್ಯ ಪುರಾತತ್ವ ಇಲಾಖೆಯ ನಿರ್ದೇಶಕರಾಗಿ ಹಾಗೂ ಚಾಮರಾಜ ಅಕಾಡೆಮಿ ಆಫ್ ವಿಷುವಲ್ ಆರ್ಟ್ಸ್‌ನ ಡೀನ್ ಆಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಆಯ್ಕೆಯಾದ ಅವರು 2006ರಲ್ಲಿ ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಅಲ್ಲಿ ಸುಮಾರು 16 ವರ್ಷ ಸೇವೆ ಸಲ್ಲಿಸಿದ ಬಳಿಕ, 2019ರಲ್ಲಿ ಸಹ ಪ್ರಾಧ್ಯಾಪಕರಾಗಿ ಬಡ್ತಿ ಪಡೆದರು. ನಂತರ ಚಿಂತಾಮಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಯಾಗಿ 3 ವರ್ಷ ಸೇವೆ ಸಲ್ಲಿಸಿದರು. ಮೈಸೂರಿಗೆ ಮರಳಿದ ಬಳಿಕ ಮಹಾರಾಣಿ ವಿಜ್ಞಾನ ಕಾಲೇಜಿನ ಮೈಕ್ರೋಬಯಾಲಜಿ ವಿಭಾಗದ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದರು.