ಮಾಲ್ದಾರೆ:ಗಿರಿಜನರ ಕಾಲೋನಿಯಲ್ಲಿ ಮಳೆಯಿಂದ ಹಾನಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ಎಸ್ ಭೋಸರಾಜು ಹಾಗೂ ಶಾಸಕ ಎಎಸ್ ಪೊನ್ನಣ್ಣ ಭೇಟಿ

ಮಾಲ್ದಾರೆ:ಗಿರಿಜನರ ಕಾಲೋನಿಯಲ್ಲಿ ಮಳೆಯಿಂದ ಹಾನಿ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್ಎಸ್ ಭೋಸರಾಜು ಹಾಗೂ ಶಾಸಕ ಎಎಸ್ ಪೊನ್ನಣ್ಣ ಭೇಟಿ

ಸಿದ್ದಾಪುರ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಲ್ದಾರೆ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಗಿರಿಜನ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾದ ಅನಿಲ್ ಕುಮಾರ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ ಪರಿಶೀಲಿಸಿದರು.    

  ಇತ್ತೀಚೆಗೆ ಸುರಿದ ಭಾರೀ ಮಳೆ ಹಾಗೂ ಗಾಳಿಯಿಂದಾಗಿ ಬಾಡಗ ಬಾಣoಗಾಲದಲ್ಲಿ ಮನೆಯ ತೀವ್ರ ಹಾನಿಯಾಗಿದೆ. ಆದ್ದರಿಂದ ಅಗತ್ಯ ಪರಿಹಾರ ಬಿಡುಗಡೆಗೆ ಸಚಿವರು ಸೂಚಿಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗ ಅಧಿಕಾರಿ ವಿನಾಯಕ ನರ್ವಾಡೆ, ಗ್ರಾ.ಪಂ. ಅಧ್ಯಕ್ಷರಾದ ಮಾಲತಿ ಇತರರು ಇದ್ದರು

.