ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ - ಮಡಿಕೇರಿಯಲ್ಲಿ ಘಟನೆ
admincoorgdaily

ಮಡಿಕೇರಿ: ನಗರದ FMKMC ಕಾಲೇಜಿನ ಹಿಂಭಾಗದಲ್ಲಿ ವ್ಯಕ್ತಿಯೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಮಿನ್ನಂಡ ರಾಜಪ್ಪ (75) ಎಂದು ಗುರುತಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ನಿವಾಸಿಯಾಗಿರುವ ರಾಜಪ್ಪ ಅವರು ಕೋವಿ (ಗನ್)ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಮಡಿಕೇರಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಯನ್ನು ವಶಕ್ಕೆ ಪಡೆಯಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಡಿಕೇರಿ ನಗರ ಠಾಣಾಧಿಕಾರಿ ಶ್ರೀಧರ್ ನೇತೃತ್ವದಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.