ಮರಗೋಡು: ಹದಗೆಟ್ಟ ರಸ್ತೆ, ದುರಸ್ತಿಗೆ ಮುಂದಾದ ಯುವಕರು: ಸ್ವಂತ ಹಣ ಹೊಂದಿಸಿ ಕಲ್ಲು, ಜಲ್ಲಿ, ಮಣ್ಣು ತಂದು ಗುಂಡಿ ಮುಚ್ಚಿದ ಯುವಕರು

Jul 4, 2025 - 17:22
Jul 4, 2025 - 17:23
 0  118
ಮರಗೋಡು: ಹದಗೆಟ್ಟ ರಸ್ತೆ, ದುರಸ್ತಿಗೆ ಮುಂದಾದ ಯುವಕರು:  ಸ್ವಂತ ಹಣ ಹೊಂದಿಸಿ ಕಲ್ಲು, ಜಲ್ಲಿ, ಮಣ್ಣು ತಂದು ಗುಂಡಿ ಮುಚ್ಚಿದ ಯುವಕರು

ಮರಗೋಡು: ಇಲ್ಲಿನ ಮರಗೋಡು- ಕಟ್ಟೆಮಾಡು ರಸ್ತೆ ಕಳೆದ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು ವಾಹನಗಳು ಸಂಚಾರ ಮಾಡಲು ಹರಸಾಹಸ ಪಡಬೇಕಾಗಿದೆ.ರಸ್ತೆ ಡಾಂಬರು ಕಾಣದೆ 15 ಅಧಿಕ ವರ್ಷಗಳೇ ಕಳೆದಿವೆ.ರಸ್ತೆ ಡಾಂಬರೀಕರಣ ಮಾಡುವಂತೆ ಸರ್ಕಾರ, ಜನಪ್ರತಿನಿಧಿಗಳನ್ನು ಬಹಳಷ್ಟು ಬಾರಿ ಮನವಿ ಮಾಡಿಕೊಂಡರು ಯಾವ ರೀತಿಯ ಸ್ಪಂದನೆ ದೊರೆತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇದೀಗ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ವಾಹನ ಸವಾರರು, ವಿದ್ಯಾರ್ಥಿಗಳು ನಡೆದಾಡಲು ಕಷ್ಟಕರವಾಗಿದೆ.ಈ ಹಿನ್ನೆಲೆ ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ಸದಸ್ಯರು ಹಾಗೂ ಸ್ಥಳೀಯರು ಸೇರಿ ತಾವೇ ಹಣಕಾಸು ಹೊಂದಿಸಿ ಕಲ್ಲು, ಜಲ್ಲಿ, ಮಣ್ಣು ತಂದು ಶ್ರಮದಾನ ಮಾಡಿ ಗುಂಡಿಗಳನ್ನ ಮುಚ್ಚಿದ್ದಾರೆ. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ಶ್ರಮದಾನದಲ್ಲಿ ಧಾರಾಕಾರ ಮಳೆಯ ಮಧ್ಯೆಯೂ ಸ್ಥಳೀಯರು ಮತ್ತು ಅಕಾಡೆಮಿ ಸದಸ್ಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.ಗುಂಡಿ ಮುಚ್ಚುವುದರ ಜೊತೆಗೆ ಅಲ್ಲಲ್ಲಿ ಮಳೆ ನೀರು ಹರಿದುಹೋಗಲು ಚರಂಡಿಗಳನ್ನು ಕೂಡ ತೆಗೆಯಲಾಗಿದೆ.ಊರಿನ ಸಮಸ್ಯೆಗಳನ್ನು ಮುಂದೆ ಬಂದು ಬಗೆಹರಿಸಬೇಕಾಗಿದ್ದ ಆಡಳಿತ ವ್ಯವಸ್ಥೆದ ಬಗ್ಗೆ ಕಟ್ಟೆಮಾಡು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಯುವಕರ ಶ್ರಮದಾನ ಸ್ಥಳೀಯ ಊರಿನವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

What's Your Reaction?

Like Like 2
Dislike Dislike 0
Love Love 0
Funny Funny 0
Angry Angry 1
Sad Sad 0
Wow Wow 1