ಮಾಯಮುಡಿ:ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಉದ್ಘಾಟನೆ: ಮಾತೃಭಾಷೆಯೊಂದಿಗೆ ಆಂಗ್ಲ ಭಾಷೆಯನ್ನು ಕಲಿತು,ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳಿಗೆ, ಎ.ಎಸ್ ಪೊನ್ನಣ್ಣ ಕರೆ

ಪೊನ್ನಂಪೇಟೆ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಮಾಯಮುಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಅನುಮತಿ ನೀಡಿದ್ದು, ಈ ಕೊಠಡಿಗಳಲ್ಲಿ ವಿದ್ಯಾರ್ಜನೆ ಪ್ರಾರಂಭಿಸುವ ಸಲುವಾಗಿ ನೂತನ ಕೊಠಡಿಗಳನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕರು ಇಂದಿನ ಯುಗದಲ್ಲಿ ಸ್ಥಳೀಯ ಭಾಷೆಯೊಂದಿಗೆ ಆಂಗ್ಲ ಭಾಷೆಯು ಅತ್ಯಂತ ಮಹತ್ವ ಪಡೆದಿದ್ದು ಮಕ್ಕಳು ಚಿಕ್ಕದರಿಂದಲೇ ಆಂಗ್ಲ ಭಾಷೆ ಕಲಿತುಕೊಂಡಲ್ಲಿ ಮುಂದಿನ ದಿನಗಳಲ್ಲಿ ಅವರ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು. ಮಕ್ಕಳು ಮಾತೃಭಾಷೆಯೊಂದಿಗೆ ಆಂಗ್ಲವನ್ನು ಕಲಿತುಕೊಂಡು ತಮ್ಮ ಮುಂದಿನ ಭವಿಷ್ಯದಲ್ಲಿ ಯಶಸ್ಸು ಕಾಣುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಾಜಿ ವಿಧಾನಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಾನಂಡ ಪ್ರತ್ಯು, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಟಾಟು ಮೊಣ್ಣಪ್ಪ, ಸ್ಥಳೀಯ ಪ್ರಮುಖರು, ಪಕ್ಷದ ಪ್ರಮುಖರು ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಹಾಗೂ ಸ್ಥಳೀಯ ಉಪಸ್ಥಿತರಿದ್ದರು.