Kodagu

ಕೊಡಗು ಅನುದಾನ ರಹಿತ ಶಾಲೆಗಳ ಒಕ್ಕೂಟದ ನಿಯೋಗದಿಂದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ

admincoorgdaily

ಕೊಡಗು ಅನುದಾನ ರಹಿತ ಶಾಲೆಗಳ ಒಕ್ಕೂಟದ ನಿಯೋಗದಿಂದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ
ವಿರಾಜಪೇಟೆ;
ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ನಿಯೋಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಿತು.

ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಸರ್ಕಾರದ ನಿಯಮಾವಳಿಗಳಿಗೆ ಸಂಬಂಧಿಸಿದ ಹಲವು ಪ್ರಮುಖ ವಿಷಯಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಒಕ್ಕೂಟದ ಅಧ್ಯಕ್ಷ ಕೊಟ್ಟರಂಗಡ ತಿಮ್ಮಯ್ಯ, ಉಪಾಧ್ಯಕ್ಷ ಮಣಿ ಮೊಹಮ್ಮದ್, ಕಾನೂನು ಸಲಹೆಗಾರ ಎಂ.ಎಸ್.ಪೂವಯ್ಯ, ಸದಸ್ಯರಾದ ಮದಂಡ ತಿಮ್ಮಯ್ಯ, ಶ್ವೇತಾ ಚಂಗಪ್ಪ, ಇಲ್ಯಾಸ್, ನೀರನ್ ಉತ್ತಪ್ಪ ಉಪಸ್ಥಿತರಿದ್ದರು.