ಜೂ.26 ಮತ್ತು 27 ರಂದು ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ

ಜೂ.26 ಮತ್ತು 27 ರಂದು ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು   ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ:ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜೂನ್, 26 ಮತ್ತು 27 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 

        ಸಚಿವರು ಜೂನ್, 26 ರಂದು ಬೆಳಗ್ಗೆ 11.30 ಗಂಟೆಗೆ ಕುಶಾಲನಗರಕ್ಕೆ ಆಗಮಿಸಲಿದ್ದಾರೆ. ಬಳಿಕ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಯಾಗಿರುವ ವಿವಿಧ ಪ್ರದೇಶ ವೀಕ್ಷಿಸಲಿದ್ದಾರೆ. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆ ಹಾನಿಯ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಲಿದ್ದಾರೆ. 

       ಜೂನ್, 27 ರಂದು ಬೆಳಗ್ಗೆ 9.30 ಗಂಟೆಗೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 9.45 ಗಂಟೆಗೆ ತಾಲ್ಲೂಕು ಆಡಳಿತ ಸೌಧ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬಳಿಕ ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.