ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ
admincoorgdaily
ಕುಶಾಲನಗರ, ಅ 12: ಕೆಲವು ತಿಂಗಳಿಂದ ನಾಪತ್ತೆಯಾಗಿದ್ದ ಕುಶಾಲನಗರದ ಮಹಿಳಾ ಸಮಾಜದ ಕಟ್ಟಡದಲ್ಲಿ ಎಳೆನೀರು, ಹಣ್ಣುಹಂಪಲು ವ್ಯಾಪಾರಿ ದೇವೇಗೌಡ ಅವರ ಮೃತದೇಹ ಕೂಡುಮಗಳೂರು ಬಳಿ ಕಾವೇರಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಅವರು ನದಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ. ಪತ್ನಿ , ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.