State News

ಶಾಸಕ ಡಾ.ಮಂತರ್ ಗೌಡ ಅವರ‌ ಪಾಸ್ ದುರ್ಬಳಕೆ

admincoorgdaily

ಶಾಸಕ ಡಾ.ಮಂತರ್ ಗೌಡ
ಮಡಿಕೇರಿ:ಶಾಸಕರ ವಿಧಾನಸೌಧ ಪ್ರವೇಶಕ್ಕೆ ಸಂಬಂಧಿಸಿದ ವಾಹನದ ವಿಶೇಷ ಪಾಸ್ ಅನ್ನು ದುರುಪಯೋಗ ಮಾಡಿರುವ ಬಗ್ಗೆ ಶಾಸಕ ಡಾ.ಮಂತರ್ ಗೌಡ ಅವರು ವ್ಯಕ್ತಿ ಒಬ್ಬನನ್ನು ತರಾಟೆಗೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಮಡಿಕೇರಿ ಕ್ಷೇತ್ರದ ಶಾಸಕರ ವಿಶೇಷ ಪಾಸ್ ಅನ್ನು ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಕಾರಿಗೆ ಅಳವಡಿಸಿ ವಿಧಾನಸೌಧಕ್ಕೆ ಪ್ರವೇಶ ಮಾಡಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ, ವ್ಯಕ್ತಿಯನ್ನು ಪತ್ತೆಹಚ್ಚಿ ಆತನನ್ನು ದೂರವಾಣಿ ಮೂಲಕ ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಪಾಸ್ ಅನ್ನು ವಾಹನದಿಂದ ತೆರವುಗೊಳಿಸಿ ಸಂಬಂಧಿಸಿದವರಿಗೆ ಹಿಂತಿರುಗಿಸುವಂತೆ ಸೂಚನೆ ನೀಡಿದ್ದಾರೆ.

ನೂತನ ಕಾರಿನಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಸಂಖ್ಯೆಯನ್ನು ಒಳಗೊಂಡ ಪಾಸ್ ಕಂಡು ವಿಧಾನಸೌಧ ಭದ್ರತಾ ಸಿಬ್ಬಂದಿ ತಕ್ಷಣ ಮಂತರ್ ಗೌಡ ಅವರ ಗಮನಕ್ಕೆ ತಂದಿದ್ದಾರೆ.
ಈ ಬಗ್ಗೆ ಕುಶಾಲನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಶಾಸಕರು, ಪಾಸ್ ದುರುಪಯೋಗ ಮಾಡಿರುವ ಪ್ರಕರಣವನ್ನು ಸ್ಪೀಕರ್ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ.