ಕೆರೆಗೆ ಕಾರು ಬಿದ್ದು ಮೃತಪಟ್ಟವರ ಕುಟುಂಬಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಸಾಂತ್ವನ
admincoorgdaily

ಸಿದ್ದಾಪುರ: ಇತ್ತೀಚೆಗೆ ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ಪುಟ್ಟ ಮಗು ಸೇರಿದಂತೆ ಮೂವರು ದಾರುಣವಾಗಿ ಮೃತಪಟ್ಟಿದ್ದ ಗುಹ್ಯ ಗ್ರಾಮದ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್, ಪಮಿತಾ ಹಾಗೂ ಲಿಯಾ ಅವರ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಅವರು ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ ಶಾಸಕರು, ನೊಂದ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯ ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಪ್ರತೀಶ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ವೆಂಕಟೇಶ್, ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿಜೋಯ್, ಮಾಜಿ ಅಧ್ಯಕ್ಷ ಬಶೀರ್, ಮಾಜಿ ಪಂಚಾಯತ್ ಸದಸ್ಯರಾದ ಮಿಲನ್, ಬಶೀರ್, ದೇವಜಾನು, ಪಕ್ಷದ ಮುಖಂಡರಾದ ಸುಕುರ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.