State News

ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮೈಸೂರು ಕೊಡವ ಸಮಾಜದಿಂದ ಸನ್ಮಾನ

admincoorgdaily

ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮೈಸೂರು ಕೊಡವ ಸಮಾಜದಿಂದ ಸನ್ಮಾನ
ಬೆಂಗಳೂರು:
ಮೈಸೂರು ಕೊಡವ ಸಮಾಜದ ವತಿಯಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ  ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.

ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ. ಗಣಪತಿ, ಉಪಾಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳು ಇಂದು ಬೆಂಗಳೂರಿನ ವಿಧಾನಸೌಧ ಕಚೇರಿಯಲ್ಲಿ ಭೇಟಿ ಮಾಡಿ, ಸಚಿವ ಸಂಪುಟ ದರ್ಜೆಯ ಎಲ್ಲಾ ಸ್ಥಾನಮಾನಗಳನ್ನು ಹೊಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿರುವ ಶ್ರೀ ಪೊನ್ನಣ್ಣ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.