ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ.ಪೂ.ಕಾಲೇಜು ವಿಭಾಗದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಎ.ಎಸ್. ಪೊನ್ನಣ್ಣ
admincoorgdaily

ನಾಪೋಕ್ಲು:ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ (ಕೆಪಿಎಸ್) ಪದವಿ ಪೂರ್ವ ಕಾಲೇಜು ವಿಭಾಗಕ್ಕೆ 1.70 ಕೋಟಿ ರೂ ಅನುದಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಹೆಚ್ಚುವರಿ ಕೊಠಡಿಗಳ ಕಟ್ಟಡ ಕಾಮಗಾರಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎ.ಎಸ್. ಪೊನ್ನಣ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಅನುದಾನ ಒದಗಿಸಲಾಗುತ್ತಿದ್ದು, ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಬಿಡುಗಡೆಯಾದ 1.70 ಕೋಟಿ ರೂ ವೆಚ್ಚದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಶೌಚಾಲಯ ಸೇರಿದಂತೆ ನಾಲಕ್ಕು ಕೊಠಡಿಗಳು ಇರಲಿದೆ. ಗುಣಮಟ್ಟದ ಕಾಮಗಾರಿ ನಡೆಸಿ ನಿಗದಿತ ಅವಧಿಯೊಳಗೆ ಕಟ್ಟಡವನ್ನು ವಿದ್ಯಾರ್ಥಿಗಳ ಬಳಕೆಗೆ ಹಸ್ತಾಂತರಿಸುವಂತಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ,ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಅಲಿ,ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಎನ್.ಎಸ್ ತಿಉದಯ ಶಂಕರ್, ಕಟ್ಟಡ ಕಾಮಗಾರಿ ಉಪ ಸಮಿತಿ ಅಧ್ಯಕ್ಷರಾದ ಕೆ.ಎ ಹಾರಿಸ್, ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷರಾದ ಕೇಟೋಳಿರ ರಾಜ ಗಣಪತಿ, ಪ್ರಾಂಶುಪಾಲರಾದ ಎ.ಎಂ.
ವಿಶಾಲ,ಉಪ ಪ್ರಾಂಶುಪಾಲರಾದ ಶಿವಣ್ಣ ಎನ್ ಎಸ್,ವಲಯಾಧ್ಯಕ್ಷ ಕುಶು ಕುಶಾಲಪ್ಪ,ಕಕ್ಕಬ್ಬೆ ವಲಯಾಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ,ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ,ಅಬ್ದುಲ್ ರಹ್ಮಾನ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಪರವಂಡ ಸಿರಾಜ್, ಪಕ್ಷದ ಮುಖಂಡರಾದ ವಾಸಿಂ ಕ್ಲಾಸಿಕ್,ಬಿದ್ದಾಟಂದ ತಮ್ಮಯ್ಯ,ಅರಾಫಾತ್, ಹಾರಿಸ್, ಅಪ್ರುರವೀಂದ್ರ ಪಂಚಾಯತ್ ಮಾಜಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ,ಶಾಲಾ ಸಮಿತಿ ಸದಸ್ಯರಾದ ಉಸ್ಮಾನ್,ಮೊಯ್ದು,ಅಸೀನಾ,ಶಾಲೆಯ ಉಪನ್ಯಾಸಕರು ಮತ್ತಿತರರು ಉಪಸ್ಥಿತರಿದ್ದರು.