ಟಿ.ಶೆಟ್ಟಿಗೇರಿ ಚೀಪೆಕೊಲ್ಲಿಯಲ್ಲಿ 12 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೂಮಿಪೂಜೆ
admincoorgdaily

ಪೊನ್ನಂಪೇಟೆ: ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮದ ಶ್ರೀ ಅಯ್ಯಪ್ಪ ದೇವಸ್ಥಾನದ ಬಳಿ ಚೀಪೆಕೊಲ್ಲಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಶಾಸಕರು ಭೂಮಿಪೂಜೆ ನೆರವೇರಿಸಿದರು.
ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು 12 ಲಕ್ಷ ರೂ. ಅನುದಾನ ಒದಗಿಸಿದ್ದು, ಇಂದು ಸ್ಥಳಕ್ಕೆ ಆಗಮಿಸಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಯನ್ನು ಶೀಘ್ರ ಆರಂಭಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ತಿತೀರ ಪ್ರಭು, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಟಾಟು ಮೊಣಪ್ಪ, ಡಿಸಿಸಿ ಸದಸ್ಯ ಪೆಮ್ಮಂಡ ರಾಜ ಕುಶಾಲಪ್ಪ, ಮುಖಂಡರಾದ ಮೋಟಯ್ಯ, ವಿಶು, ಉದಯ, ಪಾಲ್ವಿನ್ ಪೂಣಚ್ಚ, ಸೋಮಣ್ಣ, ವಕೀಲ ಎಂ.ಟಿ ಕಾರ್ಯಪ್ಪ, ಕೊಲ್ಲಿರ ಬೋಪಣ್ಣ, ಕುಂಡಚ್ಚಿರ ಮಂಜು ದೇವಯ್ಯ, ಜಗದೀಶ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.