ಸಂಪಾಜೆಯಲ್ಲಿ ರೂ. 20 ಕೋಟಿ ವೆಚ್ಚದ ನೂತನ 33/11 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿಪೂಜೆ
admincoorgdaily

ಸಂಪಾಜೆ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ಸಂಪಾಜೆ ಹೋಬಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಇಂದು ಭೇಟಿ ನೀಡಿದರು.
ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಸರಬರಾಜಿಗಾಗಿ *ರೂ. 20 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ 33/11 ಕೆ.ವಿ ವಿದ್ಯುತ್ ಪ್ರಸರಣ ಕೇಂದ್ರದ* ಕಾಮಗಾರಿಗೆ ಅವರು ಭೂಮಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ಈ ಯೋಜನೆ ಕೈಗೊಳ್ಳಲಾಗಿದ್ದು, ಕಾಮಗಾರಿ ಪೂರ್ಣಗೊಂಡ ನಂತರ ಸಂಪಾಜೆ, ಚೆಂಬು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ವಿದ್ಯುತ್ ಪೂರೈಕೆ, ವೋಲ್ಟೇಜ್ ಸಮಸ್ಯೆ ನಿವಾರಣೆಯಾಗಿ ಗುಣಮಟ್ಟದ ವಿದ್ಯುತ್ ದೊರೆಯಲಿದೆ. ಇದು ರೈತರ ಕೃಷಿ ಚಟುವಟಿಕೆಗಳಿಗೆ ಹಾಗೂ ಮುಂದೆ ಸ್ಥಾಪನೆಯಾಗಲಿರುವ ಲಘು ಉದ್ಯಮಗಳಿಗೆ ಸಹಕಾರಿಯಾಗಲಿದೆ ಎಂದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೌಕತ್ ಅಲಿ, ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕನ್ಯಾನ, ಮಾಜಿ ಅಧ್ಯಕ್ಷ ಇಸ್ಮಾಯಿಲ್, ಮುಖಂಡರುಗಳಾದ ಸೂರಜ್ ಹೊಸೂರು, ಕೊಲ್ಯದ ಗಿರೀಶ್, ಸುರೇಶ್ ಸಂಪಾಜೆ, ಹನೀಫ್ ಎಸ್.ಪಿ, ಜಾಫರ್, ರಿತಿನ್, ಮೈದು ಕುನ್ನಿ, ಮುಸ್ತು ಗುಂಜಲ, ಚೆನಿಯಪ್ಪ ಕುದುರೆಪಾಯ, ಚೆನ್ನಪ್ಪ ಕುದುರೆಪಾಯ, ರವಿರಾಜ್ ಹೊಸೂರು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.