Kodagu

ಗೋಣಿಕೊಪ್ಪಲಿನ ಹರಿಶ್ಚಂದ್ರಪುರದಲ್ಲಿ ಗಣೇಶೋತ್ಸವದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ

admincoorgdaily

ಗೋಣಿಕೊಪ್ಪಲಿನ ಹರಿಶ್ಚಂದ್ರಪುರದಲ್ಲಿ ಗಣೇಶೋತ್ಸವದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ
ಗೋಣಿಕೊಪ್ಪ: ಗೋಣಿಕೊಪ್ಪಲಿನ ಹರಿಶ್ಚಂದ್ರಪುರಕ್ಕೆ  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು.

ಹರಿಶ್ಚಂದ್ರಪುರದಲ್ಲಿ ಆಯೋಜಿಸಲಾಗಿದ್ದ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಆಚರಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮ ಸುಸೂತ್ರವಾಗಿ ನೆರವೇರಿ, ಭಕ್ತಾದಿಗಳ ಇಷ್ಟಾರ್ಥಗಳು ಈಡೇರಲಿ ಎಂದು ಹಾರೈಸಿದರು. ವಿಘ್ನ ನಿವಾರಕ ಸಿದ್ಧಿ ವಿನಾಯಕನು ನಾಡಿಗೆ ಒಳಿತನ್ನು ಮಾಡಲಿ, ಶಾಂತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಪ್ರತೀಕವಾದ ಈ ಉತ್ಸವವು ಎಲ್ಲರಿಗೂ ಒಳಿತನ್ನುಂಟು ಮಾಡಲಿ ಎಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಪ್ರಧಾನ ಕಾರ್ಯದರ್ಶಿ ಎ.ಜೆ.ಬಾಬು, ಗೋಣಿಕೊಪ್ಪಲು ಪಂಚಾಯಿತಿ ಮಾಜಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಯುವ ಕಾಂಗ್ರೆಸ್ ಮುಖಂಡ ಅಂಕಿತ್ ಪೊನ್ನಪ್ಪ, ಗಣೇಶೋತ್ಸವ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.