ನಾಪೋಕ್ಲು ವಿವೇಕಾನಂದ ಸಂಘದ ಗೌರಿ-ಗಣೇಶೋತ್ಸವದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಭಾಗಿ
admincoorgdaily

ನಾಪೋಕ್ಲು, ಸೆ.15: ನಾಪೋಕ್ಲು ಭಾಗದ ವಿವೇಕಾನಂದ ಸಂಘ (ರಿ) ಆಯೋಜಿಸಿದ ಗೌರಿ-ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ರವರು ಭಾಗವಹಿಸಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ನಾಪೋಕ್ಲು ಬ್ಲಾಕ್ ವಲಯ ಕಾಂಗ್ರೆಸ್ ಅಧ್ಯಕ್ಷ ಕುಶಾಲಪ್ಪ, ಮಾಜಿ ಅಧ್ಯಕ್ಷ ಇಸ್ಮಾಯಿಲ್, ಪಂಚಾಯಿತಿ ಮಾಜಿ ಸದಸ್ಯರಾದ ಅರುಣ್ ಬೇಬ, ಹೇಮಾವತಿ, ವಿನಾಯಕ ಸಂಘದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.