ಗೋಣಿಕೊಪ್ಪ ದಸರಾ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ ಶಾಸಕ ಎ.ಎಸ್. ಪೊನ್ನಣ್ಣ
admincoorgdaily

ಗೋಣಿಕೊಪ್ಪ: ಪ್ರಸಿದ್ಧ ಗೋಣಿಕೊಪ್ಪ ದಸರಾ ಉತ್ಸವದ ಲಾಂಛನ ಬಿಡುಗಡೆ ಕಾರ್ಯಕ್ರಮವನ್ನು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಶ್ರೀ ಎ.ಎಸ್. ಪೊನ್ನಣ್ಣ ಅವರು ನೆರವೇರಿಸಿದರು.
ಗೋಣಿಕೊಪ್ಪಲಿನ ಉಮಾಮಹೇಶ್ವರಿ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 48ನೇ ಸಾಲಿನ ದಸರಾ ಉತ್ಸವದ ಅಧಿಕೃತ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಸಕರು, ಈ ಬಾರಿಯ ನಾಡಹಬ್ಬ ದಸರಾವು ಎಲ್ಲರಿಗೂ ಒಳಿತನ್ನು ಮಾಡಲಿ, ಹಬ್ಬದಲ್ಲಿ ಭಾಗವಹಿಸುತ್ತಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.