ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ವಿಶೇಷ ಪೂಜೆ

ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ವಿಶೇಷ ಪೂಜೆ

ಭಾಗಮಂಡಲ:51ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ತಮ್ಮ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ರವರೊಂದಿಗೆ ಶ್ರೀಕ್ಷೇತ್ರ ಭಾಗಮಂಡಲ ಹಾಗೂ ತಲಕಾವೇರಿ ತಾಯಿ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಮಾನ್ಯ ಶಾಸಕರು ತಾಯಿ ಸನ್ನಿಧಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಜನ್ಮದಿನದ ದಿನಚರಿಯನ್ನು ಆರಂಭಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡರು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.