Kodagu

ವಿರಾಜಪೇಟೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಸಭೆ

admincoorgdaily

ವಿರಾಜಪೇಟೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಎಎಸ್ ಪೊನ್ನಣ್ಣ ಸಭೆ
ವಿರಾಜಪೇಟೆ;ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ವಿರಾಜಪೇಟೆ ತಾಲ್ಲೂಕು ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಲೋಕೋಪಯೋಗಿ ಇಲಾಖೆ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಪ್ರಗತಿಯಲ್ಲಿರುವ ಕಾಮಗಾರಿಗಳ ವರದಿಯನ್ನು ಪಡೆದುಕೊಂಡು, ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಸ್ತೃತವಾಗಿ ಚರ್ಚಿಸಿ, ಅಗತ್ಯ ಸೂಚನೆಗಳನ್ನು ನೀಡಿದರು.