Kodagu

ಪೆರಾಜೆ ಪರಿಶಿಷ್ಟ ಜಾತಿ ಕಾಲೋನಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ

admincoorgdaily

ಪೆರಾಜೆ ಪರಿಶಿಷ್ಟ ಜಾತಿ ಕಾಲೋನಿಗೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ
ಪೆರಾಜೆ: ಪೆರಾಜೆಯಲ್ಲಿರುವ ಪರಿಶಿಷ್ಟ ಜಾತಿ ಕಾಲೋನಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಭೇಟಿ ನೀಡಿ ಅಲ್ಲಿನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಅಧ್ಯಕ್ಷ ಶೌಕತ್ ಆಲಿ, ವಲಯ ಅಧ್ಯಕ್ಷ ಜೈರಾಮ್ ಪೆರುಮುಂಡ, ಪಕ್ಷದ ಪ್ರಮುಖರಾದ ತುಳಸಿ ಗಾಂಧಿ ಪ್ರಸಾದ್, ಸೂರಜ್ ಹೊಸೂರು, ಕಾಲೋನಿಯ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.