ಶಾಸಕ ಎಎಸ್ ಪೊನ್ನಣ್ಣ ಅವರ ಹುಟ್ಟು ಹಬ್ಬ ಆಚರಣೆ: 07 ಸರ್ಕಾರಿ ಶಾಲೆಯ 170 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದ ಮಾದಂಡ ತಿಮ್ಮಯ್ಯ

ವಿರಾಜಪೇಟೆ:ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎಎಸ್ ಪೊನ್ನಣ್ಣ ಅವರ 51ನೇ ಜನ್ಮದಿನ ಪ್ರಯುಕ್ತ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅವರು ವೈಯುಕ್ತಿಕವಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳು ಸರ್ಕಾರಿ ಶಾಲೆಗಳ 170 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಿಸಿದ ಶಾಸಕರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದರು.
ಹುದಿಕೇರಿಯಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಹಾಗೂ ಅವರ ಪತ್ನಿ ಕಾಂಚನ್ ಭಾಗವಹಿಸಿದ್ದರು.ಈ ಸಂದರ್ಭ ಮಾತನಾಡಿದ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ,ಶಾಸಕ ಎ.ಎಸ್ ಪೊನ್ನಣ್ಣ ನವರು ಎಲ್ಲರಿಗೂ ಮಾದರಿ ಶಾಸಕ ಹಾಗೂ ನಾಯಕ.ಕಡಿಮೆ ಅವಧಿಯಲ್ಲಿಯೇ ಕೋಟ್ಯಾಂತರ ರೂಪಾಯಿಗಳ ಅನುದಾನದ ಮೂಲಕ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ.ಶಾಸಕ ಎಎಸ್ ಪೊನ್ನಣ್ಣ ಅವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಿ ಆಚರಿಸಿದ್ದೇವೆ ಎಂದರು.