ಶಾಸಕ ಎ.ಎಸ್ ಪೊನ್ನಣ್ಣ ಜನ್ಮದಿನಾಚರಣೆ:" ವಾಗ್ದಾನ-ಅನುಷ್ಠಾನ ಪುಸ್ತಕ ಬಿಡುಗಡೆ

ವಿರಾಜಪೇಟೆ:ನಗರದ ಸಂತ ಅನ್ನಮ್ಮ ಸಭಾಂಗಣದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರ ಹುಟ್ಟು ಹಬ್ಬ ಸಂಭ್ರಮಾಚರಣೆಯಲ್ಲಿ ಶಾಸಕರು ಕುರಿತು ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಶಾಸಕರ ಎರಡನೇ ವರ್ಷದ ಸಾಧನೆಗಳನ್ನು ಹಾಗೂ ಕೆಲಸಗಳನ್ನು ಬಿಂಬಿಸುವ ಪುಸ್ತಕವಾದ "ವಾಗ್ದಾನ -ಅನುಷ್ಠಾನ", ಜನತಾ ನ್ಯಾಯಾಲಯದಲ್ಲಿ" ಎರಡನೇ ಅಫೀಡೆವಿಟ್ ಲೋಕಾರ್ಪಣೆ ಮಾಡಲಾಯಿತು. ಬಳಿಕ ಮಾನಸ ತಿಮ್ಮಯ್ಯ ರವರು ರಚಿಸಿದ ಶಾಸಕರ ಬಗ್ಗೆನ ಆಂಗ್ಲ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಶಾಸಕರ ಹುಟ್ಟುಹಬ್ಬದ ಪ್ರಯುಕ್ತ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಲ್ಯಾಪ್ಟಾಪ್ ನೀಡಿ ಪ್ರೋತ್ಸಾಹ ನೀಡಲಾಯಿತು.
ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, ಜಾತ್ಯತೀತ, ಸಾಮರಸ್ಯ ಹಾಗೂ ಸಮೃದ್ಧ ನಾಡನ್ನು ನಿರ್ಮಿಸುವ ಕನಸಿನೊಂದಿಗೆ ನೀವೆಲ್ಲರೂ ನನ್ನನ್ನು ಆಯ್ಕೆ ಮಾಡಿ ಇದೀಗ ಎರಡು ವರ್ಷಗಳ ಅವಧಿಯಲ್ಲಿ ಜನರಿಗಾಗಿ ಸಾಕಷ್ಟು ಕೆಲಸಗಳನ್ನು ಮಾಡಿರುವ ತೃಪ್ತಿ ಇದೆ ನನ್ನ ಜನ್ಮದಿನವನ್ನು ಇಷ್ಟು ಅದ್ದೂರಿಯಾಗಿ ಹಾಗೂ ಪ್ರೀತಿಯಿಂದ ನೀವೆಲ್ಲರೂ ಆಯೋಜಿಸಿರುವುದು ನನ್ನ ಮನ ತುಂಬಿದೆ.
ಈ ಸಂದರ್ಭದಲ್ಲಿ ಶಾಸಕರ ಧರ್ಮಪತ್ನಿ ಕಾಂಚನ್ ಪೊನ್ನಣ್ಣ, ಶಾಸಕರ ಸಹೋದರರಾದ ನರೇನ್ ಕಾರ್ಯಪ್ಪ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ ಕೊಟ್ಟಮುಡಿ, ವಿರಾಜಪೇಟೆ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ ಅಬ್ದುಲ್ ಸಲಾಂ, ವಲಯ ಅಧ್ಯಕ್ಷರುಗಳು, ಮುಂಚೂಣಿ ಘಟಕ ಸೆಲ್ ಗಳ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನಾಮನಿರ್ದೇಶಕ ಅಧ್ಯಕ್ಷರುಗಳು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಯುವ ಕಾಂಗ್ರೆಸ್ ಅಧ್ಯಕ್ಷರುಗಳು, ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯಲ್ಲಿ ಶಾಸಕರ ಅಭಿಮಾನಿಗಳು ಉಪಸ್ಥಿತರಿದ್ದರು.