ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಿದ ಶಾಸಕ ಡಾ. ಮಂತರ್ ಗೌಡ
admincoorgdaily

ಸೋಮವಾರಪೇಟೆ: ಬೇಳೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶಾಲೆಯ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಮಕ್ಕಳೊಂದಿಗೆ ಆತ್ಮೀಯವಾಗಿ ಬೆರೆತ ಶಾಸಕರು, ಅವರ ಮುಗ್ಧ ನಗು, ಉತ್ಸಾಹ ಹಾಗೂ ಸಂಭ್ರಮದಲ್ಲಿ ಪಾಲ್ಗೊಂಡು ಸಂತಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ತಮ್ಮ ಬಾಲ್ಯದ ಶಾಲಾ ದಿನಗಳನ್ನು ಮೆಲುಕು ಹಾಕಿದ ಅವರು, ಶಾಲಾ ಜೀವನದ ಸವಿನೆನಪುಗಳನ್ನು ಹಂಚಿಕೊಂಡರು.
ಬಾಲ್ಯವು ಪ್ರತಿಯೊಬ್ಬರ ಜೀವನದಲ್ಲಿಯೂ ಅತ್ಯಂತ ಸುಂದರವಾದ ಘಟ್ಟವಾಗಿದ್ದು, ಮಕ್ಕಳ ಕನಸುಗಳಿಗೆ ಪ್ರೋತ್ಸಾಹ ನೀಡುವುದು ಹಾಗೂ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಇಂದಿನ ಮಕ್ಕಳು ನಾಳಿನ ಭವಿಷ್ಯದ ಪ್ರಜೆಗಳಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಆತ್ಮವಿಶ್ವಾಸ ಮತ್ತು ಸಾಧಿಸುವ ಛಲವನ್ನು ಬೆಳೆಸಬೇಕು. ಮಕ್ಕಳ ಭವಿಷ್ಯ ಉಜ್ವಲವಾಗಲಿ ಹಾಗೂ ಅವರು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶಾಸಕ ಡಾ. ಮಂತರ್ ಗೌಡ ಅವರು ಶುಭ ಹಾರೈಸಿದರು.