ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಡಾ. ಮಂತರ್ ಗೌಡ ಅವರಿಂದ ಆತ್ಮೀಯ ಸ್ವಾಗತ
admincoorgdaily

ಮಡಿಕೇರಿ;
ಖಾಸಗಿ ಕಾರ್ಯಕ್ರಮದ ನಿಮಿತ್ತ ಕೊಡಗು ಜಿಲ್ಲೆಗೆ ಆಗಮಿಸಿದ ಕರ್ನಾಟಕ ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಾ. ಮಂತರ್ ಗೌಡ ರವರು ಗೌರವಪೂರ್ವಕವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ರವರು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು, ಕೆಪಿಸಿಸಿ ಸದಸ್ಯರಾದ ಮಂಜುನಾಥ್ ಗುಂಡೂರಾವ್ ರವರು ಉಪಸ್ಥಿತರಿದ್ದರು.