ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ
admincoorgdaily

ಕುಶಾಲನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಿತು.
ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡರವರು ಕ್ರೀಡಾಕೂಟವನ್ನು ಉದ್ಘಟಿಸಿದರು. ನಂತರ ಮಾತನಾಡಿದ ಅವರು, ಕ್ರೀಡಾ ಶಾಲೆಯ ಅಭಿವೃದ್ಧಿ ಸಂಬಂಧಿಸಿದಂತೆ ಪೂರ್ಣಪ್ರಮಾಣದ ಸಹಕಾರ ದೊರೆಯಲಿದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರಿಗೆ ಬೇಕಾದ ವ್ಯವಸ್ಥೆಗಳನ್ನು ಒದಗಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಕ್ರೀಡಾಪಟುಗಳು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಕ್ರೀಡೆಯಿಂದ ಮಾತ್ರ ಎಲ್ಲಾ ಧರ್ಮವನ್ನು ಒಂದೇ ವೇದಿಕೆಯಲ್ಲಿ ಸೇರಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ್, ಕ್ರೀಡೆಯು ಸ್ಪರ್ಧಾತ್ಮಕವಾಗಿಬೇಕು. ಕ್ರೀಡೆಯು ಸಾಮರಸ್ಯವನ್ನು ಬೆಳೆಸುತ್ತದೆ ಎಂದ ಅವರು, ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ಸಭೆ ಕರೆದು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಸಹಾಯಕ ನಿರ್ದೇಶಕರು ವಿ.ಟಿ.ವಿಸ್ಮಯ ಚಕ್ರವರ್ತಿ, ದಕ್ಷಿಣ ಕನ್ನಡ, ಉಡುಪಿ, ಮೈಸೂರು , ಹಾಸನ, ಚಿಕ್ಕಮಂಗಳೂರು ತರಬೇತುದಾರರು, ವ್ಯವಸ್ಥಾಪಕರು ಹಾಗೂ ಕ್ರೀಡಾಪಟುಗಳು ಇದ್ದರು.